ಧಾರವಾಡ ಪ್ರಜಾಕಿರಣ.ಕಾ : ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಗೆ ಮಂಗ ಕಚ್ಚಿ ಗಾಯಗೊಳಿಸಿದ ಘಟನೆ ತಾಲ್ಲೂಕಿನ ಗರಗ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಗ್ರಾಮದ ಇಕ್ರಾ ಗಡದಾಳೆ ಎಂಬ ಬಾಲಕಿಗೆ ಮಂಗ ಕಚ್ಚಿದೆ. ಗ್ರಾಮದ ಸರಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಇಕ್ರಾ, ನಿನ್ನೆ ಬೆಳಗ್ಗೆ ಶಾಲೆಗೆ ಹೋಗುವ ಸಂದರ್ಭದಲ್ಲಿ ದಾಳಿ ನಡೆಸಿದೆ.
ಗಾಯಗೊಂಡ ಬಾಲಕಿಯಗೆ ನಿನ್ನೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಮಂಗ ಇನ್ನೂ ಕೆಲವರ ಮೇಲೆ ದಾಳಿ ನಡೆಸಿರುವುದಾಗಿ ಗೊತ್ತಾಗಿದೆ.
ಘಟನಾ ಸ್ಥಳಕ್ಕೆ ಸಿಇಐ ಎಸ್.ಬಿ. ಪಾಟೀಲ ಭೇಟಿ ನೀಡಿದ್ದರು.
ಪಿಎಸ್ ಐ ಎಫ್.ಎಂ. ಮಂಟೂರ ನೇತೃತ್ವದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಮಂಗನ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಮಧ್ಯಾಹ್ನದ ವರೆಗೂ ಮಂಗ ಬಲೆಗೆ ಬಿದ್ದಿಲ್ಲ.