ರಾಜ್ಯ

ಧಾರವಾಡದ ಗರಗ ದಲ್ಲಿ ಹಲವರ ಮೇಲೆ ದಾಳಿ ಮಾಡಿದ್ದ ಮಂಗ ಬಲೆಗೆ

ಧಾರವಾಡದ ಗರಗ ದಲ್ಲಿ ಹಲವರ ಮೇಲೆ ದಾಳಿ ಮಾಡಿದ್ದ ಮಂಗ ಬಲೆಗೆ

ಧಾರವಾಡ ಪ್ರಜಾಕಿರಣ.ಕಾ : ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿ ಸೇರಿದಂತೆ ಹಲವರಿಗೆ ಕಚ್ಚಿ ಗಾಯಗೊಳಿಸಿದ್ದ ಮಂಗನನ್ನು ಶುಕ್ರವಾರ ಬಲೆಗೆ ಕೆಡವಲಾಗಿದೆ.

ಪೊಲೀಸ್‌ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆಯಿಂದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಗ್ರಾಮದ ಇಕ್ರಾ ಗಡದಾಳೆ ಎಂಬ ಬಾಲಕಿಗೆ ಮಂಗ ಕಚ್ಚಿತ್ತು. ಅಲ್ಲದೆ,
ಗಾಯಗೊಂಡ ಅನೇಕರು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆದುಕೊಂಡಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಮಂಗ ಇನ್ನೂ ಕೆಲವರ ಮೇಲೆ‌ ದಾಳಿ ನಡೆಸಿದ್ದರಿಂದ ಗ್ರಾಮಸ್ಥರು ಕಂಗಾಲಾಗಿ ಅರಣ್ಯ ಹಾಗೂ ಪೊಲೀಸರ ಮೊರೆ ಹೋಗಿದ್ದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಿಇಐ ಎಸ್.ಬಿ. ಪಾಟೀಲ,
ಗರಗ ಪೊಲೀಸ್ ಠಾಣೆ
ಪಿಎಸ್ ಐ ಎಫ್.ಎಂ. ಮಂಟೂರ ನೇತೃತ್ವದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಮಂಗನ ಸೆರೆ ಹಿಡಿಯುವ ಕಾರ್ಯ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *