ಅಂತಾರಾಷ್ಟ್ರೀಯ

ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್‌ ಯಾದವ್ ಇನ್ನಿಲ್ಲ

ಉತ್ತರಪ್ರದೇಶ prajakiran.com ಅ 10 : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ನಾಯಕ ಮುಲಾಯಂ ಸಿಂಗ್‌ ಯಾದವ್ ನಿಧನ ಹೊಂದಿದರು.

ರಾಮ್ ಮನೋಹರ್ ಲೋಹಿಯಾ, ರಾಜ್ ನಾರಾಯಣ್ ಅವರಂತಹ ನಾಯಕರ ಮಾರ್ಗದರ್ಶನದಲ್ಲಿ ಮುನ್ನೆಲೆಗೆ ಬಂದಿದ್ದ ಮುಲಾಯಂ ಸಿಂಗ್ ಅವರು ದೇಶದ ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದ್ದರು.

ಆನಂತರ ಸಮಾಜವಾದಿ ಪಕ್ಷವನ್ನು ಸ್ಥಾಪಿಸಿ, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮುಲಾಯಂ ಸಿಂಗ್ ಅವರು ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಅವರ ನಿಧನದಿಂದಾಗಿ ರಾಷ್ಟ್ರವು ಮುತ್ಸದ್ದಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿ, ಆತ್ಮಕ್ಕೆ ಶಾಂತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *