ರಾಜ್ಯ

ಮುನವಳ್ಳಿ ಪುರಸಭೆಯಲ್ಲಿ ಅರಳಿದ ಕಮಲ : ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯಲ್ಲಿ ಅಕ್ರಮ ಆರೋಪ

ವರದಿ : ಪ್ರಶಾಂತ ಹೂಗಾರ

ಸವದತ್ತಿ prajakiran.com : ತಾಲೂಕಿನ ಮುನವಳ್ಳಿ ಪಟ್ಟಣ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಬುಧವಾರ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ವಿಜಯ ಅಮಠೆ. ಉಪಾಧ್ಯಕ್ಷ ಸ್ಥಾನಕ್ಕೆ ರೇಣವ್ವ ಭಜಂತ್ರಿ ಆಯ್ಕೆಯಾಗಿದ್ದಾರೆ.

ಬುಧವಾರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಲಾಗಿದ್ದು ಅದೃಷ್ಟ ಕಮಲದ ಕೈಗೆ ಒಲಿದಿದೆ.

ಬಿಜೆಪಿಯ ವಿಜಯ ಅಮಠೆ ಅಧ್ಯಕ್ಷರಾಗಿ ಮತ್ತು ರೇಣವ್ವ ಭಜಂತ್ರಿ ಉಪಾಧ್ಯಕ್ಷರಾಗಿದ್ದಾರೆ.

ನಂತರ ಸ್ಥಳಕ್ಕೆ ಶಾಸಕ ಆನಂದ ಮಾಮನಿ ಆಗಮಿಸಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿ ಪಟ್ಟಣದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಆರೋಪ

ಚುನಾವಣಾಧಿಕಾರಿಗಳು ನಿಷ್ಪಕ್ಷಪಾತವಾಗಿ ನಡೆದುಕೊಂಡಿಲ್ಲ. ಚುನಾವಣೆ ನ್ಯಾಯ ಸಮ್ಮತವಾಗಿ ನಡೆದಿಲ್ಲ

ಮತ್ತು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

ಚುನಾವಣೆ ಬಹಿಷ್ಕರಿಸಿ ಕಾಂಗ್ರೆಸ್ ಸದಸ್ಯರು ಗದ್ದಲ ಎಬ್ಬಿಸಿದರು. ನಂತರ ಸ್ಥಳಕ್ಕೆ ಬಂದ ಪೋಲಿಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಎಲ್ಲವನ್ನೂ ತಿಳಿಗೊಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *