ಅಂತಾರಾಷ್ಟ್ರೀಯ

ದುಬೈನಲ್ಲಿ ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’

ದುಬೈ prajakiran.com : ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಮರಣಾರ್ಥ  ವಿಜಯ್ ಪ್ರಕಾಶ್ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದೆ.

ಅದಕ್ಕಾಗಿ ಅಗತ್ಯ ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದಾರೆ.

ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ದುಬೈನ ಪುನೀತ್ ರಾಜಕುಮಾರ್ ಅಭಿಮಾನಿಗಳು ಆಯೋಜಿಸುತ್ತಿರುವ ಈ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು 0552443737, 0555592434, 050 3911719. ಅಥವಾ ನೇರವಾಗಿ www.eticketing.ae ಮೂಲಕ ಟಿಕೆಟ್ ಕಾದಿರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *