ಹುಬ್ಬಳ್ಳಿ prajakiran.com : ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದರು.
ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾತನಾಡುವ ವೇಳೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ದ ವಾಗ್ದಾಳಿ ನಡೆಸಿದರು
ಇವರ ಪಕ್ಷದ ರಾಜ್ಯಾಧ್ಯಕ್ಷ ತಿಹಾರ್ ಜೈಲಿಹೋಗಿದ್ರ? ಎಂದು ಕಿಡಿಕಾರಿದರು.
ಡಿಕೆಶಿ ಮತ್ತು ಸಿದ್ದರಾಮಯ್ಯ ಜಗಳ ಮುಂದಿನ ಚುನಾವಣೆವರೆಗೂ ಮುಂದುವರೆಯತ್ತದೆ ಎಂದರು.
ನಮ್ಮ ಪ್ರಧಾನಿ ಸಬ್ ಕಾ ಸಾತ್ ಸಬ್ ವಿಕಾಸ್ ಅಂದ್ರೆ
ಸಿದ್ದರಾಮಯ್ಯ ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಅಂತಾರೆ ಎಂದು ಲೇವಡಿ ಮಾಡಿದರು.
ಅವರಿಗೆ ಸೋಲೋ ಭೀತಿ ಶುರುವಾಗಿದೆ.
ಅದಕ್ಕಾಗಿ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ಡಿಕೆಶಿ-ಸಿದ್ದು ಜೋಡೆತ್ತಲ್ಲ ಅವರು ಕಾಡೇತ್ತು.ಒಬ್ಬರಿಗೊಬ್ಬರು ಕಾದಾಟ ಶುರು ಮಾಡಿದ್ದಾರೆ ಎಂದು ಕಿಚಾಯಿಸಿದರು.
ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು.
ಈ ಪಿಸು ಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದರು.
ಕಾಂಗ್ರೆಸ್ ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ ಎರಡು ಹೋಳಾಗಿ ಹೋಗುತ್ತದೆ ಎಂದು ಭವಿಷ್ಯ ನುಡಿದರು.
ಜೆಡಿಎಸ್ ಕುಟುಂಬ ರಾಜಕೀಯ ಮಾಡುತ್ತಿದೆ.ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ.
ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ.ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಾರು ಹೇಳಿ..?
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ.
ಅವರಿಗೆ ಪಕ್ಷವೇ ಮುನ್ನೆಡಿಸೋಕೆ ಆಗ್ತಾ ಇಲ್ಲ ದೇಶ ಮುನ್ನೆಡಿಸ್ತಾರಾ..? ಎಂದರು.