ನವದೆಹಲಿ prajakiran.com : ಭಾರತದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ನೇಪಾಳ ಸರ್ಕಾರ ಭಾರತದೊಂದಿಗಿನ 22 ಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದೆ.
ಸದ್ಯ ನೇಪಾಳ ಮತ್ತು ಭಾರತದ ನಡುವಿನ 13 ಗಡಿ ಭಾಗಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.
ದಕ್ಷಿಣ ಭಾಗದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನೇಪಾಳ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಭಾರತದಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ನೇಪಾಳ ಮುನ್ನೆಚ್ಚರಿಕಾ ಕ್ರಮವಾಗಿ ಭಾರತದೊಂದಿಗಿನ ಗಡಿ ಬಂದ್ ಮಾಡಲು ತೀರ್ಮಾನಿಸಿದೆ.