ಧಾರವಾಡ ಪ್ರಜಾಕಿರಣ.ಕಾಮ್ ಜು.10: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಗೀತಾ ಸಿ.ಡಿ., ಅವರು ಇಂದು ಮುಂಜಾನೆ ಅಧಿಕಾರ ಸ್ವೀಕರಿಸಿದರು.
ಶ್ರೀಮತಿ ಗೀತಾ ಡಿ.ಎಸ್., ಅವರು ಈ ಮೊದಲು ಹಾವೇರಿ ಜಿಲ್ಲೆಯ ಜಿಲ್ಲಾನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಾಗಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ.
ಈ ಹಿಂದಿನ ಅಪರ್ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿಯವರನ್ನು ಸರಕಾರ ವರ್ಗಾವಣೆ ಮಾಡಿದೆ.