ರಾಜ್ಯ

ರಾಜ್ಯದಲ್ಲಿ ಹೊಸ ಪ್ರಕರಣಗಳು ಇಳಿಕೆ ಕಂಡರೂ ಏರುತ್ತಲೇಯಿದೆ ಸಾವಿನ ಸಂಖ್ಯೆ….!

ಬೆಂಗಳೂರು Prajakiran.com : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಹೊಸ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಏರುತ್ತಲೇ ಇದೆ.

ಕಳೆದ 24 ಗಂಟೆಗಳಲ್ಲಿ 14,304 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 464ಕ್ಕೆ ಏರಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬದ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 14,304 ಹೊಸ ಕೊರೋನಾ ಪ್ರಕರಣಗಳು ದೃಢ ಪಟ್ಟಿವೆ.

ಇನ್ನು ಒಂದೇ ದಿನಕ್ಕೆ 29,271 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೂ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 2,98,299 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾವಿನ ಸಂಖ್ಯೆ ಮಾತ್ರ ಆತಂಕಕ್ಕೀಡು ಮಾಡಿದೆ. ಕಳೆದ 24 ಗಂಟೆಯಲ್ಲಿ 464 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಇದು ಜನರನ್ನು ಮತ್ತಷ್ಟು ಭಯಕ್ಕೆ ಒಳಗಾಗುವಂತೆ ಮಾಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *