ರಾಜ್ಯ

ರಾಜ್ಯದಲ್ಲಿ ಇಂದು 2082 ಹೊಸ ಕೊರೋನಾ ಸೋಂಕು ಪತ್ತೆ, 86 ಮಂದಿ ಸೋಂಕಿಗೆ ಬಲಿ

ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2082 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 86 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿಂದು 2082 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ
ಒಟ್ಟು ಸೋಂಕಿತರ ಸಂಖ್ಯೆ 28,52,079 ಕ್ಕೆ ಏರಿಕೆಯಾಗಿದೆ.

ಅಲ್ಲದೆ 7751 ಸೋಂಕಿತರು ಚೇತರಿಸಿಕೊಂಡಿದ್ದು, ಇದುವರೆಗೆ 27,68,632 ಜನ ಗುಣಮುಖರಾಗಿದ್ದಾರೆ. 48,116 ಸಕ್ರಿಯ ಪ್ರಕರಣಗಳಿವೆ.

ಇನ್ನೂ ಇಂದು 86 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 35,308 ಜನ ಸಾವನ್ನಪ್ಪಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *