ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಹುದ್ದೆಗೆ ಡಾ. ಈಶ್ವರ ಉಳ್ಳಾಗಡ್ಡಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿನ್ನೇಯಷ್ಟೇ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐಎಎಸ್ ಅಧಿಕಾರಿ ಭರತ ಎಸ್, ಅವರಿಗೆ ಹೆಚ್ಚುವರಿ ಅಧಿಕಾರ ನೀಡಿತ್ತು.
ಆದರೆ ಇವತ್ತು ಪೂರ್ಣಾವಧಿ ಆಯುಕ್ತರನ್ನು ಸರ್ಕಾರ ನೇಮಕ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಹಿಂದಿನ ಆಯುಕ್ತ ಡಾ.ಗೋಪಾಲಕೃಷ್ಣ ಅವರ ವರ್ಗಾವಣೆ ಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ಬೆಳಗಾವಿಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿದ್ದ ಡಾ.ಈಶ್ವರ ಉಳ್ಳಾಗಡ್ಡಿ ಅವರನ್ನು ನಿಯುಕ್ತಿಗೊಳಿಸಿದೆ.
ಡಾ.ಉಳ್ಳಾಗಡ್ಡಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದಾರೆ.