ಧಾರವಾಡ ಪ್ರಜಾಕಿರಣ. ಕಾಮ್ : ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಈಜಲು ಬಾರದೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಅಣ್ಣಪ್ಪ ದಾಸನಕೊಪ್ಪ (27) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ನಿಗದಿ ಗ್ರಾಮದ ಕೆರೆಯಲ್ಲಿ
ಹೋಳಿ ಹಬ್ಬದ ನಿಮಿತ್ತ ಬಣ್ಣ ಆಡಿ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಗೊತ್ತಾಗಿದೆ.
ಧಾರವಾಡ ಜಿಲ್ಲೆಯ ಅಳ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.