ಬೆಳಗಾವಿ prajakiran.com :
ರಾಜ್ಯದಲ್ಲಿ ಜಾರಿಯಿರುವ ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯದ ಕರೋನಾ ಸ್ಥಿತಿಗತಿ, ಬೆಂಗಳೂರು ನಗರದಲ್ಲಿ ಕರೋನಾ ಬೆಳವಣಿಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜನ ಮಾರ್ಗಸೂಚಿಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸಿದರೆ ಲಾಕ್ ಡೌನ್ ಘೋಷಿಸುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದ್ದು, ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಜನರು ಇದನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸುವ ಮೂಲಕ ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು.
ಸಧ್ಯದಲ್ಲಿಯೇ ಕರೋನಾ ಸ್ಥಿತಿಗತಿಯನ್ನು ಪರಿಶೀಲಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.