ರಾಜ್ಯ

ಸಾಮಾಜಿಕ ಜಾಲತಾಣಗಳಲ್ಲಿ ನಿಜಗುಣಾನಂದ ಶ್ರೀಗಳ ವಿರುದ್ಧ ಅಪ್ರಚಾರ ಖಂಡಿಸಿ ಪ್ರತಿಭಟನೆ

ಬೆಳಗಾವಿ prajakiran.com : ಸಾಮಾಜಿಕ ಜಾಲತಾಣಗಳಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತೋಂಟದಾರ್ಯ ಶಾಖಾಮಠದ ಪೀಠಾಧಿಕಾರಿ ಹಾಗೂ ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀಗಳ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿತು.

ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ರಾಷ್ಟ್ರೀಯ ಬಸವ ಸೇನೆ ಕಾರ್ಯಕರ್ತರಿಂದ ಬೆಳಗಾವಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ನಿಜಗುಣಾನಂದ ಶ್ರೀಗಳಿಗೆ ಕಳೆದ ಹಲವು ದಿನಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದರು.

ಫೇಸಬುಕ್ ನಲ್ಲಿ ಶ್ರೀಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗುತ್ತಿದೆ. ಇದರಿಂದ ಸಮಾಜದಲ್ಲಿಅಶಾಂತಿ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದರ ವೀಡಿಯೋ ವೀಕ್ಷಿಸಲು ಈ ಲಿಂಕ್ ಬಳಸಿ :

ಇದರ ವೀಡಿಯೋ ವೀಕ್ಷಿಸಲು ಈ ಲಿಂಕ್ ಬಳಸಿ : https://www.facebook.com/prajakirannews/videos/264029121618610/

ನಿಜಗುಣಾನಂದ ಶ್ರೀಗಳಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಈಗಾಗಲೇ ಹಲವು ಭಾರಿ ಪೊಲೀಸರಿಗೆ ದೂರು‌ ನೀಡಲಾಗಿದೆ. ಆದರೆ ಇದುವರೆಗೂ ಯಾರ ಮೇಲೆಯೂ ಪೊಲೀಸರು ಸೂಕ್ತ ಕ್ರಮ ಜರುಗುಸಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀಗಳ ತೇಜೋವದೆ ಮಾಡುತ್ತಿರುವ ಆರೋಪಿಗಳನ್ನು ತಕ್ಷಣ ಬಂಧಿಸಿ, ಶ್ರೀಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮುಖಂಡರು ಆಗ್ರಹಿಸಿದರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *