ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಾಕ್ಷ್ಯಿನಾಶ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ….!

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆ

ಬೆಂಗಳೂರು prajakiran.com : ಧಾರವಾಡ ಜಿಲ್ಲೆಯ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶದಂತಹ ಗಂಭೀರವಾದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಹಿನ್ನಡೆಯಾಗಿದೆ.

ತಮ್ಮ ಮೇಲಿನ ಸಾಕ್ಷ್ಯ ನಾಶ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು.

ನ್ಯಾಯಾಲಯವು ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರ ವಾದ ಹಾಗೂ ಸಿಬಿಐ ಪರ ವಕೀಲರ ಆಲಿಸಿದ ಬಳಿಕ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಇದರಿಂದಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಸಾಕ್ಷ್ಯ ನಾಶ ಪ್ರಕರಣದಲ್ಲೂ ಜಾಮೀನು ಸಿಗದಿರುವುದು ತೀವ್ರ ನಿರಾಶೆ ಮೂಡಿಸಿದೆ‌.

ಈ ಪ್ರಕರಣದಿಂದಾಗಿ ವಿನಯ ಕುಲಕರ್ಣಿ ಗೆ
ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *