ಅಂತಾರಾಷ್ಟ್ರೀಯ

ಮಾ.12ರಂದು ಧಾರವಾಡದಲ್ಲಿ ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶನ ಇಲ್ಲ

ಧಾರವಾಡ ಪ್ರಜಾಕಿರಣ.ಕಾಮ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧಾರವಾಡದ ಐ ಐ ಟಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾ.12 ರಂದು ಭಾನುವಾರ ಹಮ್ಮಿಕೊಂಡಿದ್ದ ಕಪ್ಪು ಬಾವುಟ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಕಾಲಿಕ ನಿಧನ ಮತ್ತು ಅವಳಿ ನಗರಕ್ಕೆ ನೀರು ಪೂರೈಕೆ ಕೆಲಸ ನಿರ್ವಹಿಸುತ್ತಿದ್ದ 81 ಕಾರ್ಮಿಕರ ಮರು ನೇಮಕ ಮತ್ತು ಬಾಕಿ ವೇತನ ಬಿಡುಗಡೆ ಮಾಡುವುದಾಗಿ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ
ಅವರು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಸರಳ,ಸಜ್ಜನ ವ್ಯಕ್ತಿತ್ವದ ಮತ್ತು ಕಾಂಗ್ರೆಸ್ ನ ಕ್ರಿಯಾಶೀಲ ಸಂಘಟಕರಾಗಿದ್ದ, ಮಾಜಿ ಸಂಸದ, ಶಾಸಕ ಆರ್. ಧ್ರುವನಾರಾಯಣ್ ರವರು ಆಕಸ್ಮಿಕ ನಿಧನರಾಗಿದ್ದು, ಪಕ್ಷ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ಮತ್ತು ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆನು ಎಂದು  ಎಐಸಿಸಿ ಸದಸ್ಯ ದೀಪಕ ಚಿಂಚೋರೆ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *