ಅಂತಾರಾಷ್ಟ್ರೀಯ

ದೇಶದಲ್ಲಿ ಕರೋನಾ ಸೋಂಕಿನಿಂದ ಸಾವಿನ ಸಂಖ್ಯೆ ಇಳಿಮುಖವಾಗಿಲ್ಲ…..!

ನವದೆಹಲಿ prajakiran. com : ದೇಶ ಕರೋನಾ ಸೋಂಕಿನಿಂದ ಕೊಂಚ ಸುಧಾರಿಸಿಕೊಂಡಿದೆ.

ಕಳೆದ 24 ಗಂಟೆಯಲ್ಲಿ 1,14,460 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,14,460 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ನಿನ್ನೆ 21,430 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,69,84,781ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 14,77,799 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ದೇಶಾದ್ಯಂತ 2677 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,46,759 ಕ್ಕೆ ಏರಿಕೆಯಾಗಿದೆ.

ಸಾವಿನ ಪ್ರಮಾಣದಲ್ಲಿ ಕಡಿಮೆ ಆಗದಿರುವುದು ಸೋಂಕಿತರು ಹಾಗೂ ಅವರ ಅವಲಂಬಿತರಿಗೆ ಆತಂಕವುಂಟು ಮಾಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *