ರಾಜ್ಯ

ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆ ಭೇಟಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಮಂಗಳೂರು prajakiran.com : ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಿಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳು ಹಾಗೂ ಪ್ರಮೋದ್ ಮುತಾಲಿಕ್ ಅವರ ಈ ಹಿಂದಿನ ಪ್ರಚೋದನಾಕಾರಿ ಹೇಳಿಕೆಯಿಂದ ಕೋಮು ಸೌಹಾರ್ದತೆಗೆ ಉಂಟಾದ ಧಕ್ಕೆಯನ್ನು ಪರಿಗಣಿಸಿ ಅವರ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶವನ್ನು ನಿಷೇಧಿಸಬೇಕು ಎಂದು ಜಿಲ್ಲೆಯ ಪೊಲೀಸ್ ಅಧೀಕ್ಷಕರು ಮನವಿ ಮಾಡಿದ್ದರು.

ಆ ಮನವಿ ಪುರಸ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *