ಅಂತಾರಾಷ್ಟ್ರೀಯ

ಕೋವಿಡ್ ಔಷಧಗಳ ಜಿಎಸ್‌ಟಿ ರದ್ದುಗೊಳಿಸಿ: ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಒತ್ತಾಯ

ನವದೆಹಲಿ Prajakirana.com : ಕೊರೋನಾ ಸೋಂಕಿನ ನಿವಾರಣೆಗೆ ಬಳಸಲಾಗುವ ಔಷಧ, ಪರಿಕರಗಳ ಮೇಲಿನ ಜಿಎಸ್‌ಟಿ ರದ್ದುಗೊಳಿಸಬೇಕೆಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೋನಾ ಸೋಂಕಿನಿಂದ ಗುಣಪಡಿಸಲು ಬಳಸಲಾಗುವ ಆಕ್ಸಿಜನ್, ಲಸಿಕೆ, ವೆಂಟಿಲೇಟರ್, ಹ್ಯಾಂಡ್ ವಾಷ್, ಸ್ಯಾನಿಟೈಸರ್, ಸೋಪ್, ಬೆಡ್, ಕೋವಿಡ್ ಸಂಬಂಧಿತ ಇತರೆ ಔಷಧಿಯ ಮೇಲೆ ಜಿಎಸ್ ಟಿ ಹೇರುವುದು ಸರಿಯಲ್ಲ.

ಇಂದು ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಕೇಂದ್ರ ಸರ್ಕಾರವು ಔಷಧ, ಸಾಧನಗಳ ಮೇಲಿನ ತೆರಿಗೆಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *