ರಾಜ್ಯ

ಡೌನ್ ಅಂತೆ ಲಾಕ್ ಡೌನ್. ಬದನೆಕಾಯಿ… ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ

ಬೆಂಗಳೂರು prajakiran.com : ಲಾಕ್ ಡೌನ್ ಅಂತೆ ಲಾಕ್ ಡೌನ್. ಬದನೆಕಾಯಿ… ಸರ್ಕಾರ ಕಾಟಾಚಾರಕ್ಕೆ ಲಾಕ್ ಡೌನ್ ಮಾಡ್ತಾ ಇದೆ. ಲಾಕ್ ಡೌನ್ ವಿಚಾರದಲ್ಲಿ ಗಂಭೀರತೆ ಕಾಣಿಸ್ತಾ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದಾರೆ.

ಲಾಕ್ ಡೌನ್ ಕಟ್ಟು ನಿಟ್ಟಾಗಿ ಜಾರಿ ಮಾಡಲು ರಾಜ್ಯದ ಬಿಜೆಪಿ ಸರ್ಕಾರ ವಿಫಲವಾಗಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಗುಡುಗಿದ್ದಾರೆ.

ಅಲ್ಲದೆ, ಅದನ್ನು @CMofKarnataka, #Covid19Karnataka #KarnatakaCoronaUpdate ಗೆ ಟ್ಯಾಗ್ ಮಾಡಿ ತೀವ್ರವಾಗಿ ಖಂಡಿಸಿದ್ದಾರೆ.

ಇದಕ್ಕೆ ಪ್ರಮುಖ ಕಾರಣ 26 ಕ್ಷೇತ್ರಗಳಿಗೆ ರಾಜ್ಯ ಸರಕಾರ ವಿನಾಯಿತಿ ನೀಡಲಾಗಿದೆ. ಅಲ್ಲದೆ, ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ವಿನಾಯಿತಿ ನೀಡಲಾಗಿದೆ.

ಹೀಗಾಗಿ ಜನತೆ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಕೆಲವರು ಆರೋಗ್ಯ, ತರಕಾರಿ, ಕಿರಾಣಿ ಎಂದು ನೆಪ ಮಾಡಿ ಹೊರಬಂದರೆ ಇನ್ನೂ ಕೆಲವರು ಕಚೇರಿ, ಫ್ಯಾಕ್ಟರಿ, ಸರಕಾರಿ ಕೆಲಸ ಎಂದೆಲ್ಲಾ ಓಡಾಡುತ್ತಿದ್ದಾರೆ. ಇದು ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ.

ಈ ನಡುವೆ ಪೊಲೀಸರು ಕೂಡ ಕರೋನಾ ಕಾಟದಿಂದ ಬೇಸತ್ತಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಆತಂಕದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಂಗಳೂರು ನಗರವೊಂದರಲ್ಲಿಯೇ 1000 ಪೊಲೀಸರು ಕ್ವಾರಂಟಿನ್ ನಲ್ಲಿದ್ದರೆ. 600ಕ್ಕೂ ಅಧಿಕ ಪೊಲೀಸರು ಪಾಸಿಟಿವ್ ಆಗಿ ಕೆಲವರು ಗುಣಮುಖರಾಗಿ ಚೇತರಿಸಿಕೊಂಡು ಬಂದಿದ್ದಾರೆ.

ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳಕರ್ ತಿಳಿಸಿದ್ದಾರೆ.

ಈಗಾಗಲೇ ರಸ್ತೆಯಲ್ಲಿ ನಿಂತು ಎಂಟು ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ. ಅವರ ಬಗ್ಗೆ ನಮಗೆ ಕಾಳಜಿಯಿದೆ. ಪೊಲೀಸರ ಕುಟುಂಬದ ಸದಸ್ಯರ ಬಗ್ಗೆ ನಮಗೆ ಕಾಳಜಿಯಿದೆ. ಒಬ್ಬರಿಗೆ ಪಾಸಿಟಿವ್ ಬಂದರೆ ಎಲ್ಲರಿಗೂ ಬರುವ ಸಾಧ್ಯತೆಯಿದೆ.

ಹೀಗಾಗಿ ಅವರ ಬಗ್ಗೆ ನಮಗೆ ಆದ್ಯತೆಯಿದೆ. ನಿಮ್ಮೊಂದಿಗೆ ನಾವಿದ್ದೇವೆ. ಕರೋನಾಕ್ಕೆ ಹೆದರುವಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.

ಸಾರ್ವಜನಿಕರು ಕೂಡ ನಮಗೆ ಸಹಕರಿಸುತ್ತಿದ್ದಾರೆ. ಎಲ್ಲರೂ ಸೇರಿ ಅದರ ವಿರುದ್ದ ಹೋರಾಟ ನಡೆಸೋಣ ಎಂದು ಹೇಮಂತ್ ನಿಂಬಾಳಕರ್ ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *