ನವದೆಹಲಿ prajakiran.com : ಬೆಂಬಿಡದೆ ಹೆಚ್ಚುತ್ತಿರುವ ಕೊರೋನಾ ಮಹಾಮಾರಿಯ ನಿಯಂತ್ರಣಕ್ಕೆ ಭಾರತೀಯ ರೈಲ್ವೆ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ.
ರೈಲಿನಲ್ಲಿ ಪ್ರಯಾಣಿಸುವಾಗ ಮತ್ತು ರೈಲು ನಿಲ್ದಾಣದ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 500 ರೂ. ದಂಡ ವಿಧಿಸಲು ಇಲಾಖೆ ನಿರ್ಧರಿಸಿದೆ.
ಮುಂದಿನ ಆರು ತಿಂಗಳವರೆಗೂ ಈ ರೂಲ್ಸ್ ಜಾರಿಯಲ್ಲಿರಲಿದೆ.
ಕೋವಿಡ್-19 ಸಾಂಕ್ರಾಮಿಕ ಮತ್ತು ಸ್ವಚ್ಛತೆಗೆ ಸಂಬಂಧಿಸಿದಂತೆ ರೈಲ್ವೆಗಳಲ್ಲಿ ಬೇಯಿಸಿದ ಆಹಾರದ ಬದಲಿಗೆ ಸಿದ್ಧಪಡಿಸಿದ ಪ್ಯಾಕೇಜ್ ಮಾಡಿದ ಆಹಾರ ನೀಡಲು ಮಾರ್ಗಸೂಚಿ ಹೊರಡಿಸಲಾಗಿದೆ.
ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಮತ್ತು ಟೇಕ್ ಎವೆ ಕಿಟ್ ವಸ್ತುಗಳು ಮಾರಾಟಕ್ಕೆ ಸಿಗುವಂತೆ ಮಾಡಲಾಗಿದೆ,.
ರೈಲ್ವೆ ಸ್ಟೇಷನ್ ಗಳಲ್ಲಿ ಬಹೂಪಯೋಗಿ ಸ್ಟಾಲ್ ಗಳನ್ನು ಇಡಲಾಗಿದೆ.