rapid antijentest
ರಾಜ್ಯ

ಧಾರವಾಡದಲ್ಲಿ ಮಾಸ್ಕ್ ಧರಿಸದವರಿಗೆ ಕೋವಿಡ್ ತಪಾಸಣೆ

ಧಾರವಾಡ prajakiran.com : ಕೋವಿಡ್ ತಪಾಸಣೆಯ ಪ್ರಮಾಣ ಹೆಚ್ಚು ಮಾಡಲು ನಾಳೆ ಆಗಸ್ಟ್ ೧೮ ರಿಂದ ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗುವುದು.

ಅದರಲ್ಲೂ ಬಸ್ ನಿಲ್ದಾಣ, ಮಾರುಕಟ್ಟೆ ಮತ್ತಿತರ ಜನನಿಬಿಡ ಸ್ಥಳಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಸೋಮವಾರ ಸಂಜೆ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆ  ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ತಹಶೀಲ್ದಾರ ನೇತೃತ್ವದಲ್ಲಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಹಾತ್ಮ ಗಾಂಧಿ ನರೇಗಾ ಸಹಾಯಕ ನಿರ್ದೇಶಕರು, ಪೊಲೀಸ್ ಇನ್ಸ್ಪೆಕ್ಟರ್ ಮತ್ತಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು  ಒಳಗೊಂಡ ಸಂಚಾರಿ ಕೋವಿಡ್ ತಪಾಸಣೆ ತಂಡಗಳು ಮಾಸ್ಕ್ ಧರಿಸಿದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆ ಮಾಡುವ ಕಾರ್ಯಾಚರಣೆ ಕೈಗೊಳ್ಳಲಿವೆ ಎಂದರು.

ಎಲ್ಲಾ ನಗರ ಮತ್ತು ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ಬರುವ ಹೊರ ರೋಗಿಗಳನ್ನೂ ಕೂಡ ಕೋವಿಡ್ ತಪಾಸಣೆಗೆ ಒಳಪಡಿಸಬೇಕು.

ಜಿಲ್ಲೆಯ ಕೋವಿಡ್ ಕೇರ್ ಸೆಂಟರುಗಳಲ್ಲಿ ಉತ್ತಮ ಊಟ ಪೂರೈಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದಿದೆ. ಕ್ರೀಡಾ, ಮನರಂಜನಾ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿರಿಸಬೇಕು. ಔಷಧ ದಾಸ್ತಾನು ಸಮರ್ಪಕವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ ಮಾತನಾಡಿ, ಜಿಲ್ಲೆಯಾದ್ಯಂತ ಮಧುಮೇಹ, ರಕ್ತದೊತ್ತಡ, ಕ್ಷಯ, ಕುಷ್ಟರೋಗ, ಹೆಚ್‌ಐವಿ, ಪಾರ್ಶ್ವವಾಯು ಮತ್ತಿತರ ಕೊ-ಮಾರ್ಬಿಡಿಟಿ ಲಕ್ಷಣಗಳಿರುವ ವ್ಯಕ್ತಿಗಳು, ಹಿರಿಯ ನಾಗರಿಕರು, ಗರ್ಭಿಣಿಯರನ್ನೂ ಕೂಡ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *