ಮಂಗಳೂರು prajakiran.com : ಹಿರಿಯ ಸಾಹಿತಿ, ಬ್ಯಾರಿ ಸಂಶೋಧಕ, ಪತ್ರಕರ್ತ, ಪ್ರೊ. ಬಿ.ಎಂ. ಇಚ್ಲಂಗೋಡು (84) ನಿಧನರಾಗಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನಗರದ ಅತ್ತಾವರ ನಂದಿಗುಡ್ಡೆಯ ನಿವಾಸಿಯಾಗಿದ್ದ ಇಚ್ಲಂಗೋಡು ಅವರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇಚ್ಲಂಗೋಡು ಅವರು ಬ್ಯಾರಿ ಕ್ಷೇತ್ರ ಕಾರ್ಯದಲ್ಲಿ ಆಳವಾಗಿ ಅಧ್ಯಯನ ನಡೆಸಿ, ತಮ್ಮ ಇಳಿವಯಸ್ಸಿನಲ್ಲೂ ಅಧ್ಯಯನದಲ್ಲಿ ತೊಡಗಿಸಿ ಅನೇಕ ಯುವ ಸಂಶೋಧಕರಿಗೆ ಮಾರ್ಗದರ್ಶನವನ್ನು ನೀಡಿದ್ದರು.