ಜಿಲ್ಲೆ

ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ ನಿಷೇಧಕ್ಕೆ ಸ್ವಾಗತ

ಧಾರವಾಡ ಪ್ರಜಾಕಿರಣ .ಕಾಮ್  20 : ಇನ್ನು ಮಂದೆ ಎಲ್ಲ ಸಭೆ ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ತ.

 ಇನ್ನುಂದೆ ಯಾವುದೇ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಸರಕಾರದಿಂದ ಆಯೋಜಿಸಲ್ಪಡುವ ಸಭೆ ಸಮಾರಂಭ ಮತ್ತು ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ನಿಷೇಧಿಸಿ 2018ರ ಸಪ್ಟೆಂಬರ್‌ನಲ್ಲಿ ಸರಕಾರವು ಆದೇಶವನ್ನು ಹೊರಡಿಸಿತ್ತು.

ಆದರೆ ಇತ್ತೀಚಿನ ದಿನಗಳಲ್ಲಿ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯ, ಸರಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಿಂದ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಈ ಸರಕಾರಿ ಆದೇಶ ಪಾಲನೆಯಾಗುತ್ತಿಲ್ಲ.

ಆದುದರಿಂದ ಸರಕಾರದ ಮುಖ್ಯ ಕಾರ್ಯದರ್ಶಿಗಳು ಪುನಃ ಜಿಲ್ಲಾಡಳಿತಗಳಿಗೆ ಸುತ್ತೋಲೆಯನ್ನು ಹೊರಡಿಸಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುವುದು ಸಮರ್ಥನೀಯವಲ್ಲ ಎಂದು ತಿಳಿಸಿದ್ದಾರೆ.

ಮುಂದುವರೆದು ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ ಲೋಟಗಳಲ್ಲಿ ನೀರು ಸರಬರಾಜು ಮಾಡಲು ಕ್ರಮ ವಹಿಸಲು ಸರಕಾರವು ಪುನಃ ಆದೇಶವನ್ನು ಮಾಡಿದೆ.

ಇದು ಸರಕಾರದ ಮುಖ್ಯ ಕಾರ್ಯದರ್ಶಿಗಳ ಈ ಸರಕಾರಿ ಆದೇಶವು ಅತ್ಯಂತ ಸೂಕ್ತವಾದದ್ದು ಆಗಿರುತ್ತದೆ. ಇದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಸ್ವಾಗತಿಸುತ್ತದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರಕಾರವು ಮನಃ ಸುತ್ತೋಲೆಯನ್ನು ಜಿಲ್ಲಾಡಳಿತಗಳಿಗೆ ಹೊರಡಿಸಿರುವುದು ಸೂಕ್ತವಾಗಿದೆ ಹಾಗೂ ಅನಿವಾರ್ಯವೂ ಆಗಿತ್ತು. ಅಲ್ಲದೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಮರ್ಪಕವಾಗಿದೆ.

ಒಂದು ವೇಳೆ ಜಿಲ್ಲಾಡಳಿತವು ಸದರಿ ಸುತ್ತೋಲೆಯನ್ನು ಪುನಃ ಕಡೆಗಣಿಸಿದ್ದೇ ಆದರೆ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಸಾರ್ವಜನಿಕರ ಆರೋಗ್ಯದ ಹಿತರಕ್ಷಣೆಗಾಗಿ ಕೆಪಿಸಿಸಿ ಸದಸ್ಯ ರಾಬರ್ಟ ದದ್ದಾಪುರಿ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ಈ ಸಂದರ್ಭದಲ್ಲಿ ಆನಂದ ಜಾಧವ, ಜೇಮ್ಸ್ ಯಾಮಾ, ಬಿ.ಎಚ್‌. ಪೂಜಾರ ಶ್ರೀಮತಿ ಗೀತಾ ಥಾಂವಸಿ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *