ರಾಜ್ಯ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬೇಡ ಎಂದ ಶಿಕ್ಷಣ ತಜ್ಞ,ಪೋಷಕರು, ವಿದ್ಯಾರ್ಥಿಗಳು

http://follow/like: facebook.com/prajakirannews

ಬೆಂಗಳೂರು prajakiran.com :  ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು. ಇದರಿಂದ ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಪರೀಕ್ಷಾ ಸಿಬ್ಬಂದಿಗಳಿಗೆ ಸಂಕಷ್ಟ ಕಾದಿಟ್ಟ ಬುತ್ತಿ ಎಂದು ಶಿಕ್ಷಣ ತಜ್ಞ ನಿರಂಜನ್ ಆರಾಧ್ಯ, ಅನೇಕ ಪೋಷಕರು, ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಅವರು ಮಂಗಳವಾರ  ಸುದ್ದಿಗಾರರೊಂದಿಗೆ ಮಾತನಾಡಿ,  ಒಂದು ಎಸ್ ಎಸ್ ಎಲ್ ಸಿ ಪರೀಕ್ಷೆ  ಕೇಂದ್ರದಲ್ಲಿ ಅಂದಾಜು 150-200 ಮಕ್ಕಳು ಇರುತ್ತಾರೆ.ಅದನ್ನು ನಿರ್ವಹಿಸುವುದು ಸವಾಲಿನ ಕೆಲಸ ಎಂದು ಹೇಳಿದರು.

ಒಂದು ವೇಳೆ ಪರೀಕ್ಷೆ ವೇಳೆ ಒಂದು ಮಗುವಿಗೆ ಕರೋನಾ ಸೋಂಕು ಕಾಣಿಸಿಕೊಂಡರೆ ಆ ಮಗುವಿನ ಜೊತೆಗೆ ಸಂಪರ್ಕ ಹೊಂದಿದ ಇತರರ ಮಕ್ಕಳಿಗೆ, ಶಿಕ್ಷಕರಿಗೆ, ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಾಗೂ ಅವರ ಪೋಷಕರಿಗೆ ಹೀಗೆ ಎಲ್ಲರನ್ನೂ ಕ್ವಾರಂಟಿನ್ ಮಾಡಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.



ರಾಜ್ಯ ಸರಕಾರ ಕರೋನಾ ಉಲ್ಬಣಿಸಿದರೆ ಅಥವಾ ಹೆಚ್ಚಿದರೆ ಪರ್ಯಾಯ ವ್ಯವಸ್ಥೆ  ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಹಾಗಿದ್ದರೆ ಏನೂ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಕರೋನಾ ವೈರಸ್ ಸೋಂಕು ನಿಯಂತ್ರಣದಲ್ಲಿಲ್ಲ. ದಿನೆ ದಿನೇ ಹೊರ ರಾಜ್ಯದಿಂದ ಬಂದವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಮಕ್ಕಳಿಗೆ ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.  

ಈ ಬಗ್ಗೆ ಶಿಕ್ಷಣ ಸಚಿವರು ಇನ್ನೊಮ್ಮೆ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆ ಆಧಾರದ ಮೇಲೆ ಅಂಕ ನೀಡಿ ಪಾಸ್ ಮಾಡಿ ಎಂದು ಸಲಹೆ ನೀಡಿದ್ದಾರೆ.

ಮಕ್ಕಳ ಭವಿಷ್ಯಕ್ಕಿಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಖ್ಯಅಲ್ಲ ಎಂಬುದನ್ನು ರಾಜ್ಯ ಸರಕಾರ ಮನಗಾಣಬೇಕಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಶಿಕ್ಷಣ ತಜ್ಞ ನಿರಂಜನ ಆರಾಧ್ಯಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ  ಪಕ್ಕದ ನೆರೆ ರಾಜ್ಯಗಳಾದ ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದಾಗಿವೆ. ಅದನ್ನು ಅರ್ಥಮಾಡಿಕೊಂಡು ರಾಜ್ಯ ಸರಕಾರ ದಿಟ್ಟ ಹೆಜ್ಜೆ ಇಡಬೇಕು ಎಂದು ಅನೇಕ ಪೋಷಕರು, ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.



ಇದೇ ವೇಳೆ ಎಸ್ ಎಸ್ ಎಲ್ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಇದು ಮಹತ್ತರ ಘಟ್ಟ. ಯಾವುದೇ ಕಾರಣಕ್ಕೂ ಪರೀಕ್ಷೆ ಕೈಬಿಡಲೇಬಾರದು. ಬೇಕಿದ್ದರೆ ಇನ್ನೊಂದಿಷ್ಟು ದಿನ ಮುಂದೂಡಿ. ಕರೋನಾ ಕಡಿಮೆಯಾದ ನಂತರ ಮಾಡಿ. ಅದಕ್ಕಾಗಿ ಅಗತ್ಯ ಸಿದ್ದತೆ ಕೈಗೊಂಡು ಪರೀಕ್ಷೆ ನಡೆಸಿ ಎಂದು ಪೋಷಕರು ಅಭಿಪ್ರಾಯಪಟ್ಟಿದ್ದಾರೆ.

ಪಾಸ್ ಮಾಡುವುದಾದರೆ ಯಾವ ಆಧಾರದ ಮೇಲೆ ಅಂಕ ನೀಡುತ್ತಿರಿ. ಅವರ ಸಾಮಾರ್ಥ್ಯದ ಮೇಲೆ ಅಂಕ ನೀಡುವುದು ಸಮಂಜಸವಲ್ಲ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ತಮ್ಮಅನಿಸಿಕೆ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೇಶರ್ ಕೊಡಬಹುದು. ಸಾಮಾಜಿಕ ಅಂತರ ಕಾಪಾಡಬಹುದು. ಆದರೆ ಶಾಲೆಗಳಿಗೆ ಬಂದ ನಂತರ ಶಿಕ್ಷಣ ಇಲಾಖೆ ಹೊಣೆ ಹೊರುತ್ತದೆ. ಅವರು ಶಾಲೆಗೆ ಬಂದು ತಲುಪವರೆಗೆ ಆನಂತರ ಮನೆಗೆ ಹೋಗುವವರೆಗೆ ಯಾರು ಹೊಣೆ ಹೊರುತ್ತಾರೆ ಎಂಬ ಪ್ರಶ್ನೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಪ್ರಶ್ನೆಯಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *