ಅಂತಾರಾಷ್ಟ್ರೀಯ

ಕೊರೋನಾ ಸೋಂಕು ತಗುಲಿದ್ದ ಆರು ಮಂದಿ ಆಕ್ಸಿಜನ್ ಕೊರತೆಯಿಂದ ಸಾವು…..!

ನವದೆಹಲಿ prajakiran. com : ಆಕ್ಸಿಜನ್ ಕೊರತೆಯಿಂದಾಗಿ ಆರು ಕೊರೋನಾ ಸೋಂಕಿತರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಶಾದೋಲ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದು, 56 ಮಂದಿ ಅಪಾಯದಿಂದ ಪಾರಾಗಿದ್ದಾರೆ.

ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ರೋಗಿಗಳಿಗೆ ಸರಬರಾಜು ಮಾಡಬೇಕಿದ್ದ ಆಕ್ಸಿಜನ್ ಖಾಲಿಯಾಗುವ ಹಂತಕ್ಕೆ ಬಂದಿತ್ತು.

ಮುಂಚೆಯೇ ಇದರ ಕುರಿತು ಮಾಹಿತಿ ನೀಡಿದರೂ ಆಕ್ಸಿಜನ್ ವಾಹನಗಳು ಬಂದಿರಲಿಲ್ಲ.

ಹೀಗಾಗಿ ರೋಗಿಗಳಿಗೆ ಪೂರೈಸುವ ಆಕ್ಸಿಜನ್ ಪ್ರಮಾಣವನ್ನು ಇಳಿಕೆ ಮಾಡಲಾಗಿತ್ತು.

ಇದರಿಂದಾಗಿ ಆರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ.

ಈ ಪ್ರಕರಣದಿಂದ ಸರ್ಕಾರದ ಬಗ್ಗೆ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *