ರಾಜ್ಯ

ಬೆಳಗಾವಿ ಜಿಲ್ಲೆಯ ಕಿತ್ತೂರು ಶಾಸಕ ದೊಡ್ಡಗೌಡರ ಹುಟ್ಟುಹಬ್ಬಕ್ಕೆ ಹೂ ಮಳೆ ಸುರಿದಿದ್ದ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಬೆಳಗಾವಿ prajakiran.com : ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟುಹಬ್ಬಕ್ಕೆ ಪೊಲೀಸ್ ಅಧಿಕಾರಿಗಳು ಭರ್ಜರಿ ಶುಭ ಕೋರಿ ಅನಗತ್ಯ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು.

ಶಾಸಕ ದೊಡ್ಡಗೌಡರ ಹಾಗೂ ಅವರ ಪತ್ನಿಯನ್ನು ರಾಜ-ರಾಣಿಯಂತೆ ಕೂರಿಸಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಹೂಮಳೆ ಸುರಿಸಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು.

ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದಲ್ಲಿ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ ಐ ಶೀಗಿಹಳ್ಳಿ, ಎಸ್ ಐ ವಿಶ್ವನಾಥ್ ಮಲ್ಲಣ್ಣವರ್ ಸೇರಿದಂತೆ ಹಲವು ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಶಾಸಕರ ಹುಟ್ಟುಹಬ್ಬದಲ್ಲಿ ಭಾಗಿಯಾಗಿ ಹೂ ಮಳೆ ಸುರಿಸಿದ್ದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಇಲಾಖೆ ನಿಯಮದ ಪ್ರಕಾರ ಶೋಕಾಸ್ ನೋಟೀಸ್ ನೀಡಿ ವಿವರಣೆ ಕೇಳಿದ್ದಾರೆ.

ಈ ಘಟನೆ ಬಗ್ಗೆ ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

ಅಲ್ಲದೆ, ಶಾಸಕರ ಹಾಗೂ ಪೊಲೀಸ್ ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ನಿಯಮಾನುಸಾರ ಕರ್ತವ್ಯದ ಸಮಯದಲ್ಲಿ ಖಾಕಿ ಸಮವಸ್ತ್ರದ ಮೇಲೆ ಹೋಗಿ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಇತ್ತಿಚೆಗೆ ಸೂತ್ತೋಲೆ ಹೊರಡಿಸಿದ್ದನ್ಬು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *