ರಾಜ್ಯ

ಧಾರವಾಡದ ಶ್ರೀಯಾ ಆಸ್ಪತ್ರೆಗೆ ನೋಟಿಸ್ : ದರಪಟ್ಟಿ ನಮೂದಿಸದ ಆರೋಪ

ಧಾರವಾಡ prajakiran.com : ಕೋವಿಡ್-೧೯ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ.೫೦ ರಷ್ಟು ಹಾಸಿಗೆ ಮೀಸಲಿಡಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ತಪ್ಪು ಮಾಹಿತಿ ನೀಡಿದ ಹುಬ್ಬಳ್ಳಿಯ ಮೂರು ಆಸ್ಪತ್ರೆಗಳಿಗೆ ಕಾರಣ ಕೇಳಿ ನೋಟಿಸ್ ನೀಡದ ಬೆನ್ನಲ್ಲಿಯೇ ಬುಧವಾರ ಧಾರವಾಡದ ಶ್ರೀಯಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ 24 ಗಂಟೆಗಳಲ್ಲಿ ಸೂಕ್ತ ಉತ್ತರ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನೋಟಿಸ್  ಜಾರಿ ಮಾಡಿದ್ದಾರೆ. 

ಧಾರವಾಡ ಜಿಲ್ಲಾ ನ್ಯಾಯಾಲಯದ ಎದುರು ಇರುವ ಶ್ರೀಯಾ ಆಸ್ಪತ್ರೆಯಲ್ಲಿ, 29 ಜನ ಕೋವಿಡ್ ದೃಢಪಟ್ಟವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯವರು ಹೇಳಿದ್ದರು.
ಆದರೆ ಏ.28ರಂದು ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ 23 ಪ್ರಕರಣಗಳ ಎಸ್‌ಆರ್‌ಪಿಐಡಿ ಸಂಖ್ಯೆಗಳು ಮಾತ್ರ ಕಂಡು ಬಂದಿವೆ.
ಹಾಗೂ ಕೆಪಿಎಂಇ ಕಾಯ್ದೆಯಡಿ ಆಸ್ಪತ್ರೆಯ ಮುಂಭಾಗದಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಕಾಣುವ ಎಬಿಆರ್‌ಕೆ ಯೋಜನೆಯ ಮಾಹಿತಿ ಹಾಗೂ ರೋಗಿಗಳಿಗೆ ವಿಧಿಸುವ ದರಪಟ್ಟಿಯನ್ನು ಪ್ರದರ್ಶಿಸದೇ ಇರುವುದು ಕಂಡು ಬಂದಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *