ಅಂತಾರಾಷ್ಟ್ರೀಯ

ಕೇರಳದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಇನ್ನಿಲ್ಲ….!

ಬೆಂಗಳೂರು ಪ್ರಜಾಕಿರಣ.ಕಾಮ್  ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು.

ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು.

ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು.

ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು.

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *