ರಾಜ್ಯ

ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿದ ತಾಯಿ….!

ಗದಗ prajakiran.com : ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ಬಡ ತಾಯಿಯೊಬ್ಬರು ತಾಳಿ ಮಾರಿ ಟಿವಿ ಖರೀದಿಸಿದ  ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಇದು ಕೊರೋನಾ ಸೋಂಕು ಜನರ ಜೀವವಷ್ಟೇ -ಜೀವನದ ಜೊತೆಗೂ ಚೆಲ್ಲಾಟ ಮಾಡುತ್ತಿದೆ ಎಂಬುದು ಸಾಬೀತುಪಡಿಸಿದೆ.

ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ ಎಂಬುದಕ್ಕೆ ನಿರ್ದಶನವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ, ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ಇಂತಹ ಸಂಕಷ್ಟದ ಸಂದರ್ಭದಲ್ಲಿ ಅಂತಹ ದಿಟ್ಟ ನಿರ್ಧಾರ ಕೈಗೊಂಡಿರುವುದು ಅವರ ಕುಟುಂಬದ ದಯನೀಯ ಪರಿಸ್ಥಿತಿ ಹಾಗೂ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ ಎಂದು ನೋವು ಹಂಚಿಕೊಂಡಿದ್ದಾರೆ.

ಚಂದನ ಟಿವಿಯಲ್ಲಿ ಸೇತು ಬಂಧ ಕಾರ್ಯಕ್ರಮ ಮೂಡಿ ಬರುತ್ತಿರುವುದರಿಂದ ಮಕ್ಕಳ ಒತ್ತಾಯಕ್ಕೆ ಮಣಿದು ತಾಯಿ ತನ್ನ ತಾಳಿಯನ್ನು ಅಡವಿಟ್ಟು, ಟಿವಿ ಖರೀದಿಸಿ, ಅವರ ಭವಿಷ್ಯಕ್ಕಾಗಿ ತನ್ನಅಭ್ಯುದ್ಯಯವನ್ನು ಧಾರೆ ಎರೆದಿದ್ದಾರೆ. ಮಕ್ಕಳ ಭವಿಷ್ಯ ರೂಪಿಸಲು ಕಸ್ತೂರಿ ಇಟ್ಟಿರುವ ಹೆಜ್ಜೆ ಕುರಿತು ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ.

ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೋನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಆನ್ ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಎನಗೆ ಮನೆ ಇಲ್ಲ , ಎನಗೆ ಧನವಿಲ್ಲ , ಮಾಡುವದೇನು? ನೀಡುವದೇನು? ಮನೆ ಧನ ಸಕಲ ಸಂಪದ ಸೌಖ್ಯವುಳ್ಳ ನಿಮ್ಮ ಶರಣರ ತಪ್ಪಲಕ್ಕಿಯ ತಂದು, ಎನ್ನೊಡಲ ಹೊರೆವೇನಾಗಿ, ಅಮರೇಶ್ವರ ಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ ಸಂಗನ ಬಸವಣ್ಣಾ ಎಂಬ ವಚನವನ್ನು ಪ್ರಸ್ತುತ ಕಾಲಕ್ಕೆ ಹೇಳಿಮಾಡಿಸಿದಂತಿದೆ ಎಂದು ವಿವರಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *