ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಜೂ. 21 ರಿಂದ ಮದವೆಗಳಿಗೆ ಅನುಮತಿ : ಇ-ಪಾಸ್ ಗಾಗಿ ಆನ್ ಲೈನ್ ಅರ್ಜಿ

ಡಿಸಿ ನಿತೇಶ ಪಾಟೀಲ ಆದೇಶ

ಧಾರವಾಡ prajakiran. com14 :  ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಜೂನ 14 ರಿಂದ 21ರ ವರೆಗೆ ಲಾಕ್‍ಡೌನ ಜಾರಿಯಲ್ಲಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ, ಜೂನ 21 ರಿಂದ ಜಿಲ್ಲೆಯಲ್ಲಿ ಆಯೊಜಿಸುವ ಮದುವೆಗಳಿಗೆ ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಇಂದು ಆದೇಶ ಹೊರಡಿಸಿರುವ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಮದುವೆ ಸಮಾರಂಭಗಳಿಗೆ ಅನುಮತಿ ನೀಡುವುದು ಅವಶ್ಯಕವಾಗಿದೆ.

ಜೂನ್ 21 ರಿಂದ ಜರುಗಲಿರುವ ಮದುವೆ ಸಮಾರಂಭಗಳಿಗೆ ಗರಿಷ್ಟ 40 ಜನ ಮೀರದಂತೆ ಅವರ ಸ್ವ-ಗೃಹ ಮುಂದೆ ಕೋವಿಡ್-19 ಮಾರ್ಗಸೂಚಿಯಂತೆ ಮದುವೆ ಸಮಾರಂಭಗಳನ್ನು ಜರುಗಿಸಲು ಜಿಲ್ಲೆಯಾದ್ಯಂತ ಅವಕಾಶ ಕಲ್ಪಿಸಲಾಗಿದೆ.

ಅನುಮತಿಗಾಗಿ www.supportdharwad.in ನೇದ್ದಕ್ಕೆ ಆಧಾರ ಕಾರ್ಡ ಹಾಗೂ ಮದುವೆ ಕಾರ್ಡನೊಂದಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ರ ಒಳಗಾಗಿ ಮದುವೆ ಜರುಗುವ ಮೂರು ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಿ, ಅನುಮತಿ ಪಡೆಯಬಹುದೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *