ಅಂತಾರಾಷ್ಟ್ರೀಯ

ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಕಚೇರಿಗಳಲ್ಲಿ ಅವಕಾಶ

ಅಸ್ಸಾಂ prajakiran.com : ಕೊರೋನಾ ಲಸಿಕೆಯ ಎರಡು ಡೋಸ್ ಹಾಕಿಸಿಜೊಂಡವರು ಮಾತ್ರ ಕೆಲಸಕ್ಕೆ ಹಾಜರಾಗಬಹುದು ಎಂದು ಅಸ್ಸಾಂ ಸರ್ಕಾರ ಹೇಳಿದೆ.

ಸರ್ಕಾರಿ ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಕೋವಿಡ್ -19 ಲಸಿಕೆಯ ಎರಡೂ ಪ್ರಮಾಣವನ್ನು ಪಡೆದ ಅಸ್ಸಾಂ ಸರ್ಕಾರದ ಎಲ್ಲಾ ಉದ್ಯೋಗಿಗಳಿಗೆ ನಿಯಮಿತವಾಗಿ ಕಚೇರಿಗೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ’ ಎಂದು ಸಾಮಾನ್ಯ ಆಡಳಿತ ಇಲಾಖೆ ಆಯುಕ್ತ ಮತ್ತು ಕಾರ್ಯದರ್ಶಿ ಎಂ.ಎಸ್.ಮಣಿವಣ್ಣನ್ ತಿಳಿಸಿದರು.

ಎಲ್ಲಾ ಉದ್ಯೋಗಿಗಳು ಕಚೇರಿ ಆವರಣದಲ್ಲಿ ಕೋವಿಡ್ ನಿಯಮ ಅನುಸರಿಸಬೇಕು. ಅಸ್ಸಾಂ ಪ್ರಸ್ತುತ ಭಾಗಶಃ ಕೋವಿಡ್ -19 ಲಾಕ್‌ಡೌನ್ ಅಡಿಯಲ್ಲಿದೆ.

ಜೂನ್ 15ರ ವರೆಗೆ ಜಾರಿಯಲ್ಲಿರುತ್ತದೆ.
ವ್ಯಕ್ತಿಗಳ ಸಂಚಾರದ ಮೇಲೆ ಸಂಪೂರ್ಣ ನಿಷೇಧ ಹೇರಿ ಮಧ್ಯಾಹ್ನ 1 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *