ಸಾವಿನ ಸಂಖ್ಯೆ 4,120ಕ್ಕೆ ಏರಿಕೆ
ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳಲ್ಲಿ ಇಳಿಮುಖವಾಗಿದ್ದರೂ, ಸಾವಿನ ಸಂಖ್ಯೆ ಕಡಿಮೆಯಾಗಿತ್ತಿಲ್ಲ.
ಕಳೆದ 24 ಗಂಟೆಯಲ್ಲಿ 4,120 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 3,62,727 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,62,727 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,37,03,665 ಕ್ಕೆ ಏರಿಕೆಯಾಗಿದೆ.
ಇನ್ನೂ ಬುಧವಾರ ದೇಶದಲ್ಲಿ 3,52,181 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,97,34,823 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 37,10,525 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶಾದ್ಯಂತ 4,120 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,58,317 ಕ್ಕೆ ಏರಿಕೆಯಾಗಿದೆ.