ರಾಜ್ಯ

ಮದುವೆ ಹಾಗೂ ಇತರೆ ಸಮಾರಂಭಗಳ ಆಯೋಜನೆಗೆ ಪಾಸ್ ಕಡ್ಡಾಯ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ

ಧಾರವಾಡ prajakiran.com: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅತ್ಯವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜರುಗುವ ಮದುವೆ ಹಾಗೂ ಇತರೆ ಸಭೆ ಸಮಾರಂಭಗಳಿಗೆ ಏ. 16 ರಂದು ಹೊರಡಿಸಿದ ಸರ್ಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ಸೇರಬಹುದಾದ ಸಂಖ್ಯೆಗನುಗುಣವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಲ್ಲ ವಲಯ ಆಯುಕ್ತರು ಹಾಗೂ ಜಿಲ್ಲೆಯಲ್ಲಿ ಎಲ್ಲ ತಹಶೀಲ್ದಾರವರು ‘’ಪಾಸ್’’ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಎಪ್ರಿಲ್ 17 ರಂದು ಜಿಲ್ಲಾಧಿಕಾರಿಗಳೊಂದಿಗೆ ಜರುಗಿದ ವಿಡಿಯೋ ಸಂವಾದದಲ್ಲಿ ಗೃಹ ಸಚಿವರು ನೀಡಿದ ನಿರ್ದೇಶನದಂತೆ ಪಾಸ್ ವಿತರಿಸುವ ಮೊದಲು ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣ ಪತ್ರವನ್ನು ಪಡೆದ ನಂತರ ‘’ಪಾಸ್’’ ನೀಡಬೇಕು.

ಒಂದು ವೇಳೆ ಪಾಸ್ ಪಡೆಯದೇ ತಮ್ಮ ವಲಯ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಮದುವೆ ಹಾಗೂ ಇತರೆ ಸಭೆ ಸಮಾರಂಭಗಳು ಜರುಗುತ್ತಿದ್ದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಹಾಗೂ ಅಂತಹ ಸಭೆ ಸಮಾರಂಭಗಳು ಜರುಗುವ ಕಲ್ಯಾಣ ಮಂಟಪ ಹಾಗೂ ಇತರೆ ಸಭಾಂಗಣಗಳನ್ನು ‘’ಸೀಜ್’’ ಮಾಡಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಬೇಕು.

ಪಾಸ್ ನೀಡಿದ ಸಮಾರಂಭಗಳಲ್ಲಿ ನಿಗದಿತ ಸಂಖ್ಯೆಯನ್ನು ಮೀರಿ ಜನರು ಸೇರಿದ್ದಲ್ಲಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಧಾರವಾಡ ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು ಅಂತಹ ಸಭೆ, ಸಮಾರಂಭಗಳನ್ನು ತಕ್ಷಣ ಸ್ಥಗಿತಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ.

*ಸಭೆ ಸಮಾರಂಭಗಳಲ್ಲಿ ಜನಿಮಿತಿಗೊಳಿಸಿ ಎ.16 ರಂದು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು* :
ಕೋವಿಡ್ 2ನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಚ್ 24 ರಂದು ಸಭೆ ಸಮಾರಂಭಗಳಲ್ಲಿ ಜನ ಸೇರುವ ಮಿತಿ ಮತ್ತು ದಂಡ ವಿಧಿಸುವ ಬಗ್ಗೆ ಆದೇಶ ಹೊರಡಿಸಿತ್ತು.

ಮತ್ತೇ ಏಪ್ರಿಲ್ 16 ರಂದು ಕೆಲವು ಅಂಶಗಳನ್ನು ಪರಿಷ್ಕರಿಸಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

*ಮದುವೆ ಸಮಾರಂಭ*:

ತೆರೆದ ಪ್ರದೇಶದಲ್ಲಿ 200 ಜನ ಮೀರದಂತೆ ಹಾಗೂ ಕಲ್ಯಾಣ ಮಂಟಪ, ಸಭಾಂಗಣ ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಜನ ಮೀರದಂತೆ ಭಾಗವಹಿಸಲು ಅನುಮತಿ ನೀಡಲಾಗಿದೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *