ರಾಜ್ಯ

ಧಾರವಾಡ : ಆತ್ಮಹತ್ಯೆಗೆ ಯತ್ನಿಸಿದ ಯರಿಕೊಪ್ಪ ಪಿಡಿಒ…..!?

ಧಾರವಾಡ ಪ್ರಜಾಕಿರಣ.ಕಾಮ್ : ಕಿರುಕುಳಕ್ಕೆ ಬೇಸತ್ತು ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸ್ನೇಹಿತರಿಗೆ ವಿಡಿಯೋ ಕಳ್ಸಿ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ಐ ಎಂ ಸ್ವಾರಿ ಸಂದೇಶ ಕಳುಹಿಸಿ ಔಷಧಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆರ್.ಟಿ.ಐ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಎಂಬ ವ್ಯಕ್ತಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದು, ವಿಡಿಯೋ ನೋಡಿದ ಸ್ನೇಹಿತರು ಅವರನ್ನು ಹುಡುಕಾಟ ನಡೆಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಆರ್ ಟಿ ಐ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಅನೇಕ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದಾರೆ.

ನಮ್ಮಗೂ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದು, ಧಾರವಾಡ ಬೆಳಗಾವಿ ರಸ್ತೆಯ ಪಕ್ಕದಲ್ಲಿ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *