ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕಿರಾಣಿ ಅಂಗಡಿ ಆರಂಭಿಸಲು ಅವಕಾಶ ನೀಡುವಂತೆ ಆಗ್ರಹ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಅಗತ್ಯ ಸೇವೆಯಲ್ಲಿ ಬರುವ ಕಿರಾಣಿ ಅಂಗಡಿಗಳ ಮಾರಾಟಕ್ಕೆ ಅವಕಾಶ ನೀಡದಿರುವುದು ವ್ಯಾಪಾರಸ್ಥರ ಹಾಗೂ ವರ್ತಕರಿಗೆ ಮತ್ತು ಅದರಲ್ಲೂ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧಾರವಾಡ ಅಪರ್ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮೂಲಕ ಸೋಮವಾರ ಮನವಿ ಸಲ್ಲಿಸಲಾಯಿತು.

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ
ಪಿ.ಎಚ್. ನೀರಲಕೇರಿ ಮಾತನಾಡಿ, ಕರೋನಾದಿಂದ
ಜಿಲ್ಲೆಯಲ್ಲಿ ಸಾವಿರಾರು ಜನ
ಸಣ್ಣಪುಟ್ಟ ವ್ಯಾಪಾರಸ್ಥರು ಜೀವನ ನಡೆಸುವುದು ಬಹಳ ಕಷ್ಟಕರವಾಗಿದೆ.

ಅದರ ಮೇಲೆಯೇ ಅವಲಂಬಿತರಾಗಿರುವ ಸಾವಿರಾರು ಕುಟುಂಬ ವರ್ಗದವವರಿಗೆ ಧಾರವಾಡ ಜಿಲ್ಲಾಧಿಕಾರಿಯವರ ಆದೇಶ ತೀವ್ರ ನೋವುಂಟು ಮಾಡಿದೆ ಎಂದು ಹೇಳಿದರು.

ಮೇ 27,28 ಹಾಗೂ 29ರಂದು ಕೇವಲ ಮೂರು ದಿನಗಳ ಕಾಲ ನೀಡಿದ ಅವಕಾಶವನ್ನೇ ಮುಂದೆ ಇಟ್ಟುಕೊಂಡು ಈಗ ಅವರಿಗೆ ಜೂನ್ 7 ರವರೆಗೆ ಅಂಗಡಿ ಬಂದ್ ಮಾಡುವಂತೆ ಸೂಚಿಸಿರುವುದು ನೋಡಿದರೆ ಒಟ್ಟಾರೆ ಎರಡು ವಾರಗಳ ಕಾಲ ಬಂದ್ ಮಾಡಿಸಿರುವುದು ಸರಿಯಾದ ಕ್ರಮವಲ್ಲ‌ ಎಂದರು.

ಜಿಲ್ಲಾಧಿಕಾರಿಯವರ ಈ ಆದೇಶವನ್ನು ಪುನರ್ ಪರಿಶೀಲನೆ ನಡೆಸಿ, ಕಿರಾಣಿ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಪತ್ರಕರ್ತ ನಾಗರಾಜ ಕಿರಣಗಿ ಮಾತನಾಡಿ, ಧಾರವಾಡ ಜಿಲ್ಲೆಯ ಲಕ್ಷಾಂತರ ಮಧ್ಯಮ ವರ್ಗ, ಕೂಲಿ ಕಾರ್ಮಿಕರು, ಶ್ರಮಿಕ ವರ್ಗದ ಹಾಗೂ ಬಡ ಜನರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡಲು ಕಿರಾಣಿ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಈ ನಿಟ್ಟಿನಲ್ಲಿ ನಮ್ಮ ಧಾರವಾಡ ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಎಚ್ಚೆತ್ತುಕೊಂಡು ಬಡವರ ನೋವಿಗೆ ಸ್ಪಂದಿಸಬೇಕು.

ತಿಂಗಳಲ್ಲಿ ಹದಿನೈದು ದಿನ ಕಾಲ ಕಠಿಣ ಲಾಕ್ ಡೌನ್ ಹೆಸರಿನಲ್ಲಿ ಅಗತ್ಯ ವಸ್ತುಗಳ ಸೇವೆಯಾದ ಕಿರಾಣಿ ಅಂಗಡಿ ಬಂದ್ ಮಾಡಿದ್ದರಿಂದ
ಲಕ್ಷಾಂತರ ರೂಪಾಯಿ ಸಾಲ ಸೂಲ ಮಾಡಿ ಅಂಗಡಿ ನಡೆಸುವ ವ್ಯಾಪಾರಸ್ಥರಿಗೆ ಕಟ್ಟಡ ಬಾಡಿಗೆ, ನೌಕರರ ಸಂಬಳ ಕೊಡುವುದು ಕೂಡ ಸವಾಲಿನ ಕೆಲಸವಾಗಲಿದೆ ಎಂಬುದನ್ನು ಅರಿತುಕೊಳ್ಳಬೇಕು.

ಹೀಗಾಗಿ ಜೂನ್ ಒಂದರಿಂದ ಹೋಟೆಲ್ ಮದ್ಯ ಮಾರಾಟಕ್ಕೆ ಅವಕಾಶ ನೀಡಿದಂತೆ ಕಿರಾಣಿ ಅಂಗಡಿಗಳ ಆರಂಭಕ್ಕೆ ಅವಕಾಶ ನೀಡಬೇಕು.

ಆ ಮೂಲಕ ಜನಸಾಮಾನ್ಯರ ಆಶೋತ್ತರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕಿದೆ ಎಂದು ಪತ್ರಕರ್ತ ನಾಗರಾಜ ಕಿರಣಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದಣ್ಣ ಕಂಬಾರ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *