ರಾಜ್ಯ

ರಾಜ್ಯದಲ್ಲಿಯೂ 100ರ ಗಡಿ ಮುಟ್ಟಿದ ಇಂಧನ ಬೆಲೆ

ಬೆಂಗಳೂರು prajakiran.com : ದಿನದಿಂದ ದಿನಕ್ಕೆ ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇಂದು ಕರ್ನಾಟಕದಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದು, ಇದೇ ಮೊದಲಬಾರಿಗೆ ದೇಶದಲ್ಲಿ ಒಂದೇ ತಿಂಗಳಲ್ಲಿ 20 ಬಾರಿ ಇಂಧನ ದರ ಏರಿಕೆಯಾಗಿದೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಲಡಾಖ್ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ.

ಬಳ್ಳಾರಿಯಲ್ಲಿ ಲೀಟರ್ ಪೆಟ್ರೋಲ್ ದರ 100.08 ರೂ, ಶಿರಸಿಯಲ್ಲಿ 100.29 ರೂ. ಗಡಿ ದಾಟಿದೆ.

ಬೆಂಗಳೂರಿನಲ್ಲಿ 97.98 ರೂ. ಸೇರಿದಂತೆ ಉಳಿದ ಜಿಲ್ಲೆಗಳಲ್ಲೂ ದರ ಶತಕದ ಅಂಚಿನಲ್ಲಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *