ರಾಜ್ಯ

ಕಾವೇರಿ : ಪ್ರಧಾನಿ ಮಧ್ಯಪ್ರವೇಶಕ್ಕೆ ಮನವಿ

*ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ*

*ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ*

*ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ತಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ*

*ಸಂಜೆ ಕೇಂದ್ರ ಜಲ ಸಂಪನ್ಮೂಲ ಸಚಿವರ ಸಭೆ ಬಳಿಕ ಮುಂದಿನ ತೀರ್ಮಾನ*

*ಸುಪ್ರೀಂಕೋರ್ಟ್ ಮುಂದೆ CWMA ಆದೇಶಕ್ಕೆ ನಾವು ತಡೆಯಾಜ್ಞೆ ಕೇಳುತ್ತೇವೆ*

ಬೆಂಗಳೂರು ಸೆ 20: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ದೆಹಲಿಯಲ್ಲಿ ನಡೆಸಿದ ಸರ್ವ ಪಕ್ಷ ಸಭೆ ನಾಯಕರು, ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ.

ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ.

ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ತಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ.

ಸಂಜೆ ಕೇಂದ್ರ ಜಲ ಸಂಪನ್ಮೂಲ ಸಚಿವರ ಸಭೆ ಬಳಿಕ ಮುಂದಿನ ತೀರ್ಮಾನ ಎಂದರು.

*ಗೋಷ್ಠಿಯ ಇತರೆ ಹೈಲೈಟ್ಸ್*

*ನಿರ್ಮಲಾ ಸೀತಾರಾಮನ್ ಒಬ್ಬರನ್ನು ಹೊರತುಪಡಿಸಿ ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರು, ಕೇಂದ್ರ ಸಚಿವರು ಸಭೆಯಲ್ಲಿ ಹಾಜರಿದ್ದರು. ನಿರ್ಮಲಾ ಸೀತಾರಾಮನ್ ಅವರು ಅನ್ಯಕಾರ್ಯ ನಿಮಿತ್ತ ಭಾಗವಹಿಸಲು ಸಾಧ್ಯವಾಗಿಲ್ಲ*

*ಈಗಾಗಲೇ ರಾಜ್ಯದಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಿದ್ದೇವೆ*

*123 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ*

*ವಾಡಿಕೆಗಿಂತ ಅತಿ ಕಡಿಮೆ ಮಳೆ ಸಂಕಷ್ಟ ಹೆಚ್ಚಲು ಕಾರಣ*

*177.2 TMC ನೀರು ಸಾಮಾನ್ಯ ವರ್ಷದಲ್ಲಿ, ಮಳೆ ಚೆನ್ನಾಗಿದ್ದಾಗ ನೀರು ಬಿಡಬೇಕು ಎಂದು ಹೇಳಿದೆ. ಆದರೆ ಇಂಥಾ ಸಂಕಷ್ಟದ ಸಂದರ್ಭದಲ್ಲಿ ಎಷ್ಡು ನೀರು ಬಿಡಬೇಕು ಎನ್ನುವ ಸೂತ್ರ ಇಲ್ಲದಿರುವುದು ಸಮಸ್ಯೆಯಾಗಿದೆ*

*ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ*

*CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ*

*ತಮಿಳುನಾಡು ವಾದ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ*

*ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿಲ್ಲ ಎಂದು CWMA ಮುಂದೆಯೂ ಮನವಿ ಸಲ್ಲಿಸಲಿದ್ದೇವೆ*

*10 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎನ್ನುವ ಆದೇಶ ಬಂದಾಗ, 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಅಂದಾಗೆಲ್ಲಾ ಒಟ್ಟು ಮೂರು ಬಾರಿ ನಾವು ಸರ್ವ ಪಕ್ಷ ಸಭೆ ಕರೆದಿದ್ದೇವೆ*

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *