ನವದೆಹಲಿ prajakiran.com : ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ.
ಸಂಜೆ 5.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದು, ಕ್ರೀಡಾಪಟುಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿ, ಉತ್ತಮ ಪ್ರದರ್ಶನ ನೀಡುವಂತೆ ಉತ್ತೇಜನ ನೀಡಲಿದ್ದಾರೆ ಎನ್ನಲಾಗಿದೆ.
ಈ ಸಂವಾದ ಕಾರ್ಯಕ್ರಮದಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ಸಹಾಯಕ ಸಚಿವ ನಿಶಿತ್ ಪ್ರಾಮಾಣಿಕ್, ಕಾನೂನು ಸಚಿವ ಕಿರಣ್ ರಿಜಿಜು ಕೂಡ ಪಾಲ್ಗೊಳ್ಳಲಿದ್ದಾರೆ.