ನವದೆಹಲಿ Prajakiran. com : ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಈ ಸಮಯದಲ್ಲಿ ಕೋವಿಡ್ ಲಸಿಕೆ ಕೊರತೆ ಉಂಟಾಗಿರುವ ಮಾತುಗಳು ಕೇಳಿಬರುತ್ತಿದೆ.
ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಲಸಿಕೆ ತಯಾರಕಾ ಸಂಸ್ಥೆಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಇಂದು ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಅಗತ್ಯವಿರುವಷ್ಟು ಲಸಿಕೆಯ ಡೋಸ್ಗಳನ್ನು ಉತ್ಪಾದಿಸುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನೂ ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.