ರಾಜ್ಯ

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಆನ್‌ಲೈನ್ ಅರ್ಜಿ ಆಹ್ವಾನ

ಧಾರವಾಡ prajakiran.com : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ   ಯೋಜನೆಯನ್ನು (PMEGP)  ೨೦೨೦-೨೧ ರ ವರೆಗೆ ಮುಂದುವರಿಸಲಾಗಿದೆ.

ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕಾ ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಸಾಲ ಸೌಲಭ್ಯ ಒದಗಿಸಲು ಜಿಲ್ಲೆಯೆ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು Website:www.kviconline.gov.in/pmegpeportal  ಈ ವೆಬ್‌ಸೈಟ್‌ನಲ್ಲಿ ತಿಳಿಸಿದ ಮಾರ್ಗಸೂಚಿಯಂತೆ ಅರ್ಜಿಯನ್ನು ಜೂನ್.೧೫, ೨೦೨೦ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ:೦೮೩೬-೨೩೨೨೬೨೭, ಸಹಾಯಕ ನಿರ್ದೇಶಕರು-೯೮೮೬೪೧೨೫೯೯, ಕೈಗಾರಿಕಾ ವಿಸ್ತರಣಾಧಿಕಾರಿ, ಹುಬ್ಬಳ್ಳಿ-೯೯೦೨೪೧೨೪೨೮ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ, ಧಾರವಾಡ-೯೮೮೬೨೫೧೦೯೬ ಹಾಗೂ ಸಿ.ಪಿ. ನಾರಾಯಣಕರ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕೆವಿಐಬಿ, ಧಾರವಾಡ-೯೪೮೦೮೨೫೬೨೨ ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *