ರಾಜ್ಯ

ಧಾರವಾಡದ ಹೊಸಯಲ್ಲಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಬೀಸಿದ ಪೊಲೀಸರು…..!

ಧಾರವಾಡ prajakiran.com : ಧಾರವಾಡದ ಹೊಸ ಯಲ್ಲಾಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಈ ವೇಳೆ ಧಾರವಾಡ ಎಸಿಪಿ ಅನುಷಾ ಮಹಾನಗರ ಪಾಲಿಕೆ ಸದಸ್ಯ ಶಂಕರ ಶೆಳಕೆ ಹಾಗೂ ಬಿಜೆಪಿ ಮುಖಂಡರ ಮೇಲೆ ದರ್ಪ ತೋರಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು

ಇದರಿಂದಾಗಿ ಪೊಲೀಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಬೀಸಿದ್ದಾರೆ.

ಇದರಿಂದಾಗಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ, ನಡು ರಾತ್ರಿ ಲೆಕ್ಕಿಸದೆ ಬಿಜೆಪಿ ಕಾರ್ಯಕರ್ತರು ನಡು ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು.

ಪೊಲೀಸರು ಅವರ ಮನವೊಲಿಸಲು ಹರಸಾಹಸ ನಡೆಸಿದರು.

ಆದರೆ ಶುಕ್ರವಾರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿ ರಾತ್ರಿ  ಪಾಸ್ಸಾಗಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮತ್ತೆ ಯುವಕರು ಹಾಗೂ ಹಿರಿಯರೊಂದಿಗೆ ಧಾರವಾಡ ಎಸಿಪಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದು ಶಂಕರ ಶೆಳಕೆ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.

ಪೊಲೀಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಬೀಸಿರುವುದನ್ನು ಖಂಡಿಸಲಾಗುವುದು ಎಂದು ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *