ರಾಜ್ಯ

ರೇಣುಕಾ ಸುಕುಮಾರ ಹುಬ್ಬಳ್ಳಿ-ಧಾರವಾಡ ನೂತನ ಪೊಲೀಸ್ ಕಮೀಷರನ್

ಬೆಂಗಳೂರು ಪ್ರಜಾಕಿರಣ. ಕಾಮ್ : ಕಳೆದ ಹಲವು ವರ್ಷಗಳ ಹಿಂದೆ ಹುಬ್ಬಳ್ಳಿ ಧಾರವಾಡ ಉಪ ಪೊಲೀಸ್ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದ ದಕ್ಷ ಪೊಲೀಸ್ ಅಧಿಕಾರಿ ರೇಣುಕಾ ಸುಕುಮಾರ ಅವರನ್ನ ನೂತನ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಆದ ಮೇಲೆ ಇವರು ಮೊಟ್ಟಮೊದಲ ಮಹಿಳಾ ಪೊಲೀಸ್ ಆಯುಕ್ತರು ಎಂಬುದು ವಿಶೇಷ.

ರಾಜ್ಯ ಸರಕಾರ ಇದೀಗ ರೇಣುಕಾ ಸುಕುಮಾರ ಅವರನ್ನು ಪೊಲೀಸ್ ಕಮೀಷನರ್ ಆಗಿ ವರ್ಗಾಯಿಸುವ ಮೂಲಕ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರಿ ಆಗಲಿದೆ.

ಈ ಹಿಂದೆ ಅವರು ಡಿಸಿಪಿಯಾಗಿದ್ದಾಗ ಸುಪರ್ ಕಾಪ್ ಆಗಿ ಗಮನ ಸೆಳೆದು ದೊಡ್ಡ ದೊಡ್ಡ ರೌಡಿಗಳಿಗೆ ನಡುಕ ಹುಟ್ಟಿಸಿದ್ದರು.

ಇದೀಗ ಮತ್ತೆ ಅವರ ಆಗಮನದಿಂದ ಹುಬ್ಬಳ್ಳಿ ಧಾರವಾಡದ ಬಹುತೇಕ ಅಕ್ರಮ ಚಟುವಟಿಕೆಗಳಿಗೆ ಬಿಸಿ ತಾಕಲಿದೆ‌ಯೇ ಎಂಬುದು ಬರುವ ದಿನಗಳಲ್ಲಿ ಕಾದು ನೋಡಬೇಕಿದೆ‌.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *