ರಾಜ್ಯ

ಪೊಲೀಸ್ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ನ. ೨೩ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

ಧಾರವಾಡ prajakiran.com : ಧಾರವಾಡದ ಹೆಬ್ಬಳ್ಳಿ ಜಿಪಂ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಉಪನಗರ ಪೊಲೀಸ್ ಠಾಣೆಯ ತನಿಖಾಧಿಕಾರಿಯಾಗಿದ್ದ ಚೆನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ನ. ೨೩ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಸಿಬಿಐ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ಮುಂದೂಡಿದೆ.

ಈ ಹಿಂದೆ ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ
ನ್ಯಾಯಾಲಯದಲ್ಲಿ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ಹೈಕೋರ್ಟ್ ಮೊರೆ ಹೋಗಿದ್ದರು.

ನವ್ಹೆಂಬರ ೧೧ ರಂದು ಒಂದು ವಾರ ವಿಚಾರಣೆ ಮುಂದೂಡಿದ್ದ ಧಾರವಾಡ ಹೈಕೋರ್ಟ್ ಮತ್ತೆ ೨೩ಕ್ಕೆ ಮುಂದೂಡಿದೆ.

ಇದೀಗ ನ.23ರ ಹೈಕೋರ್ಟ್ ವಿಚಾರಣೆ ಯತ್ತ ಎಲ್ಲರ ಚಿತ್ತ ನೆಟ್ಟಿದ್ದು ತೀವ್ರ ಕುತೂಹಲ ಕೆರಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *