ಜಮ್ಮು ಕಾಶ್ಮೀರ prajakiran.com : ಇಲ್ಲಿನ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುರುವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪುಲ್ವಾಮಾ ಪೊಲೀಸರು, ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ಭಾರತೀಯ ಸೈನಿಕರು ಜಂಟಿ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾದ ಹಂಜಿನ್ ರಾಜ್ ಪೊರಾ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಬಗ್ಗೆ ಖಚಿತ ಮಾಹಿತಿ ಪಡೆದು, ಶೋಧ ಕಾರ್ಯ ನಡೆಸಿದೆ.
ಈ ವೇಳೆ ಭದ್ರತಾ ಪಡೆಗಳನ್ನು ಗಮನಿಸಿದ ಉಗ್ರರು ಗುಂಡಿನ ದಾಳಿ ನಡೆಸಲು ಮುಂದಾಗಿದ್ದು, ಎರಡು ತಂಡಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಸ್ಥಳದಲ್ಲಿ ಶೋಧಕಾರ್ಯ ಮುಂದುವರೆದಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.