ರಾಜ್ಯ

ಪುರುಷ ಹಾಗೂ ಮಹಿಳಾ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಧಾರವಾಡ prajakiran. com ಮೇ.25*: ಜಿಲ್ಲೆಯಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಜಿ ಸಲ್ಲಿಕೆಯು
ಮೇ 25 ರಿಂದ ಆರಂಭವಾಗಿದ್ದು, ಜೂನ್ 25 , 2021 ಅರ್ಜಿ ಸಲ್ಲಿಕೆಯ ಕೂನೆಯ‌‌ ದಿನವಾಗಿದೆ.

ದ್ವೀತಿಯ ಪಿ.ಯು.ಸಿ. ಅಥವಾ‌ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ, ಅಧಿಕೃತ ಮಾಹಿತಿ ಹಾಗೂ ಇಲಾಖೆ ಅಧಿಸೂಚನೆಗಾಗಿ
ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://recruitment.ksp.go.in ನೋಡಬಹುದು.

ಮತ್ತು ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ನೇಮಕಾತಿ ಕಚೇರಿಯ ದೂರವಾಣಿ -0836-2233205 ಯನ್ನು ಸಂಪರ್ಕಿಸಬಹುದೆಂದು ಧಾರವಾಡ ಜಿಲ್ಲಾ‌ ಪೊಲೀಸ್ ವರೀಷ್ಠಾಧಿಕಾರಿ ಪಿ.ಕೃಷ್ಣಕಾಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *