ಅಂತಾರಾಷ್ಟ್ರೀಯ

ನನ್ನ ವಿರುದ್ದ ಆರೋಪ ಮಾಡುವವರಿಗೆ ದೇವರು ಸದ್ಬುದ್ದಿ ಕೊಡಲಿ ಎಂದ ಪ್ರಲ್ಹಾದ ಜೋಶಿ

 ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಪ್ರಕರಣದಲ್ಲಿಅನಗತ್ಯವಾಗಿ ನನ್ನ ಹೆಸರು ತಳಕು ಹಾಕಲಾಗುತ್ತಿದೆ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತಿದೆ.

ಯಾರು ನನ್ನ ವಿರುದ್ದ ಆರೋಪ ಮಾಡುತ್ತಿದ್ದಾರೋ ಅವರಿಗೆ ದೇವರು ಸದ್ಬುದ್ದಿ ಕೊಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕುಟುಕಿದ್ದಾರೆ.

ಅವರು ಶುಕ್ರವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಶಾಸಕರ ಸಭೆ ವಿಚಾರ ಶಾಸಕರ ಸಭೆಗಳು ಅಲ್ಲಲ್ಲಿ ನಡೆಯುತ್ತಲೇ ಇರುತ್ತವೆ. ಅದಕ್ಕೂ ಸಚಿವ ಸಂಪುಟ ಸಂಬಂಧ ಇರುವುದಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ಸಿಎಂ ಮತ್ತು ಹೈಕಮಾಂಡ್‌ಗೆ ಬಿಟ್ಟ ವಿಚಾರ ಈ ಹಿಂದೆಯೂ ಹುಬ್ಬಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಸಭೆ ಆಗಿತ್ತು ಅದನ್ನೂ ಸಹ ರಹಸ್ಯ ಸಹ ಎಂದಿದ್ದರು. 

ಅದೆಲ್ಲ ಇರುವುದೇ.  ಸಧ್ಯ ಆಗುತ್ತಿರೋ ಸಭೆಗಳಿಗೂ ಸಂಪುಟ ವಿಸ್ತರಣೆಗೂ ಸಂಬಂಧ ಇಲ್ಲಸೂಕ್ತ ಸಮಯ ನೋಡಿಕೊಂಡು ಸಿಎಂ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದರು.

 ಕೋವಿಡ್ ನಿರ್ವಹಣೆ ಸರಿಯಾಗಿ ಆಗಿಲ್ಲ ಅನ್ನೋ ಪ್ರತಿಪಕ್ಷಗಳ ಆರೋಪ ವಿಚಾರ 58 ಕ್ಕೂ ಹೆಚ್ಚು ಉಪಚುನಾವಣೆ, ಬಿಹಾರ ಚುನಾವಣೆಯಲ್ಲಿ ಜನರು ಬಿಜೆಪಿಗೆ ಮತ ನೀಡಿದ್ದಾರೆ ಎಂದರು.

ಉಪ ಚುನಾವಣೆ, ಬಿಹಾರ ಚುನಾವಣೆಯಲ್ಲಿ ಜನರು ಸ್ಪಷ್ಟವಾದ ಉತ್ತರ ಕೊಟ್ಟಿದ್ದಾರೆ ಮೋದಿಯವರ ಜನಪ್ರಿತಿಯತೆ ಎಷ್ಟಿದೆ ಅಂದರೆ ಮಣಿಪುರದಿಂದ ತೆಲಂಗಾಣದವರೆಗೆ ಬಿಜೆಪಿ ಗೆಲುವು ಸಾಧಿಸಿದೆ ಎಂದರು.

ಬಿಹಾರದಲ್ಲಿ ಸತತವಾಗಿ ಮೂರನೇ ಗೆಲುವು. ಕೊವಿಡ್ ನಿಂದ  ಆರ್ಥಿಕತೆಗೆ ತೊಂದರೆಯಾಗಿರೋದು ನಿಜ. ಐದು ವರ್ಷದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದೆ, ಜಿ.ಎಸ್.ಟಿ. ಕಲೆಕ್ಷನ್ ಕೂಡ ಇದೀಗ ಹೆಚ್ಚಾಗಿದೆ ಎಂದರು.

ಎಲ್ಲ ಕ್ಷೇತ್ರಗಳಲ್ಲಿ ಉತ್ಪಾದನೆ ಹೆಚ್ಚಾಗಿದೆ. ಬಂಡವಾಳ ಹೂಡಿಕೆಯೂ ಹೆಚ್ಚಾಗಿದೆಇವೆಲ್ಲ ದೇಶದ ಆರ್ಥಿಕತೆ ಪುನಶ್ಚೇತನಗೊಂಡಿದೆ ಅನ್ನೋದನ್ನ ಹೇಳುತ್ತೆ. ಭಾರತದ ಜನರು ಪ್ರಧಾನಿ ಜೊತೆ ಗಟ್ಟಿಯಾಗಿ ನಿಂತಿದ್ದಾರೆ ಎಂದರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *