ನವದೆಹಲಿ prajakiran.com : ರೈತ ಕುಟುಂಬದ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ಹರ್ಗಾಂವ್ ನಲ್ಲಿ ವಶಕ್ಕೆ ಪಡೆದಿದ್ದಾರೆ.
ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭೇಟಿ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ನಾಲ್ವರು ರೈತರು ಸೇರಿ 8 ಜನರು ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲೆಂದು ಪ್ರಿಯಾಂಕಾ ಗಾಂಧಿ ತೆರಳುತ್ತಿದ್ದರು.
ಈ ವೇಳೆ ಹರ್ಗಾಂವ್ ನಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ತಡೆದಿದ್ದಾರೆ.
ಇದರಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಹೀಗಾಗಿ ತಕ್ಷಣ ಪ್ರಿಯಾಂಕಾ ಗಾಂಧಿ ಹಾಗೂ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.