ರಾಜ್ಯ

ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶ

*ನಿಷ್ಪಕ್ಷಪಾತವಾದ ತನಿಖೆ ಮೂಲಕ ಇಡೀ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜುಲೈ 04 :

ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಬ್ಬನ್ ಪಾರ್ಕ್‍ನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ.

ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎಷ್ಟೇ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ , ಯಾವುದೇ ತನಿಖೆ ನಡೆದಿರಲಿಲ್ಲ ಎಂದು ತಿಳಿಸಿದರು…

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *