education minister sureshkumar
ರಾಜ್ಯ

ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಮುಂದೂಡಿಕೆ

ಬೆಂಗಳೂರು prajakiran.com : ಕರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 24ರಿಂದ ರಾಜ್ಯದಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದರು.

ಅವರು ಮಂಗಳವಾರ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಈ ಮಹತ್ವದ ಹೇಳಿಕೆ ನೀಡಿದರು.

ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದರು.

ಇದರಿಂದಾಗಿ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಬೇಕೆಂದು ಮನವಿ ಮಾಡಿದ್ದಾರೆ.

ಇದೇ ವೇಳೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದುಪಡಿಸಲಾಗಿದ್ದು, ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಮುನ್ನ ಬ್ರಿಡ್ಜ್ ಕೋರ್ಸ್ ನಡೆಸಲಾಗುವುದು.

ಶಿಕ್ಷಣ ಇಲಾಖೆಯ ಯೂ-ಟ್ಯೂಬ್ ಚಾನಲ್ ಮೂಲಕ ಈಗಿನಿಂದಲೇ ಈ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ಮನವಿ ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *